ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ1,045 ದೌರ್ಜನ್ಯ ಪ್ರಕರಣಗಳು: ವರದಿ
ಬಾಂಗ್ಲಾದೇಶ್ ಹಿಂದೂ ಬುದ್ಧಿಸ್ಟ್ ಕ್ರಿಶ್ಚಿಯನ್ ಯುನಿಟಿ ಕೌನ್ಸಿಲ್ (ಬಿಎಚ್'ಬಿಸಿಯುಸಿ) ಸಂಘಟನೆಯ ವರದಿಯ ಪ್ರಕಾರ 2023 ರಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ 1,045 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಸುಮಾರು 45 ಜನರು ಮೃತರಾಗಿದ್ದಾರೆ.
ವರದಿ: ಲೀಸಾ ಝೆಂಗಾರಿನಿ, ಅಜಯ್ ಕುಮಾರ್
ಬಾಂಗ್ಲಾದೇಶ್ ಹಿಂದೂ ಬುದ್ಧಿಸ್ಟ್ ಕ್ರಿಶ್ಚಿಯನ್ ಯುನಿಟಿ ಕೌನ್ಸಿಲ್ (ಬಿಎಚ್'ಬಿಸಿಯುಸಿ) ಸಂಘಟನೆಯ ವರದಿಯ ಪ್ರಕಾರ 2023 ರಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ 1,045 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಸುಮಾರು 45 ಜನರು ಮೃತರಾಗಿದ್ದಾರೆ.
ಧಾರ್ಮಿಕ ಹಾಗೂ ಪ್ರಾದೇಶಿಕ ಅಲ್ಪಸಂಖ್ಯಾತರುಗಳ ಮೇಲೆ ನಡೆಯುವ ದೌರ್ಜನ್ಯಗಳು ಬಾಂಗ್ಲಾದೇಶದಲ್ಲಿ ಎಗ್ಗಿಲ್ಲದೆ ಮುಂದುವರೆದಿದೆ. ಕಳೆದ ವರ್ಷ ಒಂದರಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ಇವುಗಳಲ್ಲಿ ಬಹುತೇಕ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ.
ಈ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ಧಾರ್ಮಿಕ ಹಾಗೂ ಪ್ರಾದೇಶಿಕ ಅಲ್ಪಸಂಖ್ಯಾತರನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರಗಳು ಹಾಗೂ ಪೊಲೀಸ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಈ ವರದಿಯು ಅಭಿಪ್ರಾಯ ಪಟ್ಟಿದೆ.
2017ರಲ್ಲಿ ಪೋಪ್ ಫ್ರಾನ್ಸಿಸ್ ಅವರು ಬಾಂಗ್ಲಾದೇಶಕ್ಕೆ ಪ್ರೇಷಿತ ಪ್ರಯಾಣವನ್ನು ಕೈಗೊಂಡಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು.
10 July 2024, 17:56