ಹುಡುಕಿ

ಸಣ್ಣ ಜ್ವರದ ಹಿನ್ನೆಲೆ ಸೋಮವಾರದ ಕಾರ್ಯಕ್ರಮಗಳನ್ನು ರದ್ದುಪಡಿಸಿದ ಪೋಪ್ ಫ್ರಾನ್ಸಿಸ್

ಪೋಪ್ ಫ್ರಾನ್ಸಿಸ್ ಅವರಿಗೆ ಭಾನುವಾರ ರಾತ್ರಿ ಸಣ್ಣ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರು ಸೋಮವಾರದ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ ಎಂದು ತಿಳಿದು ಬಂದಿದ್ದು, ಇದು ಅವರು ಮುಂದಿನ ವಾರ ಲುಕ್ಸೆಂಬರ್ಗ್ ದೇಶಕ್ಕೆ ಪ್ರೇಷಿತ ಭೇಟಿಯನ್ನು ನೀಡುತ್ತಿರುವ ಹಿನ್ನೆಲೆ ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮವಾಗಿದೆ ಎಂದು ವ್ಯಾಟಿಕನ್ ಮಾಧ್ಯಮ ಪ್ರಕಟಣೆಯು ತಿಳಿಸಿದೆ.

ವರದಿ: ವ್ಯಾಟಿಕನ್ ನ್ಯೂಸ್

"ಪೋಪ್ ಫ್ರಾನ್ಸಿಸ್ ಅವರಿಗೆ ಸಣ್ಣ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಅವರ ಸೋಮವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ" ಎಂದು ಮಾಧ್ಯಮ ಪ್ರಕಟಣೆಯು ಹೇಳಿದೆ.

ಇದೇ ತಿಂಗಳು 26-29 ರವರೆಗೆ ಪೋಪ್ ಫ್ರಾನ್ಸಿಸ್ ಅವರು ಲುಕ್ಸೆಂಬರ್ಗ್ ಹಾಗೂ ಬೆಲ್ಜಿಯಂ ದೇಶಗಳಿಗೆ ಪ್ರೇಷಿತ ಪ್ರಯಾಣವನ್ನು ಕೈಗೊಳ್ಳುತ್ತಿದ್ದಾರೆ.

23 September 2024, 16:18