ಇಸ್ರೇಲ್ ಪ್ರಧಾನಿ ವಿರುದ್ಧ ಐಸಿಸಿ ಬಂಧನ ವಾರೆಂಟ್ ಜಾರಿ
ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತಾನ್ಯಾಹು ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ವರದಿಯಾಗಿದೆ.
ವರದಿ: ವ್ಯಾಟಿಕನ್ ನ್ಯೂಸ್
ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತಾನ್ಯಾಹು ವಿರುದ್ಧ ಅಂತರಾಷ್ಟ್ರೀಯ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ವರದಿಯಾಗಿದೆ. ನೆದರ್ಲ್ಯಾಂಡ್ ನ ಹೇಗ್‌ನಲ್ಲಿರುವ ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯವು ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಗುರುವಾರ ಬಂಧನ ವಾರೆಂಟ್ ಜಾರಿಗೊಳಿಸಿದೆ.
ನೆತನ್ಯಾಹು ಜೊತೆಗೆ ಇಸ್ರೇಲ್ ನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್ ನಾಯಕ ಮುಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ ಅವರಿಗೂ ಬಂಧನ ವಾರಂಟ್‌ಗಳನ್ನು ಪ್ರಕಟಿಸಿದೆ.
ನಾಗರೀಕರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡಲು ಸೂಚನೆ ನೀಡುವುದು, ಮತ್ತು ಹಸಿವನ್ನು ಯುದ್ಧದ ಅಸ್ತ್ರವನ್ನಾಗಿ ಬಳಸುವುದು ಅಪರಾಧ ಎಂದು ಹೇಳಿರುವ ನ್ಯಾಯಾಲಯವು, ನೇತನ್ಯಾಹು ಸೇರಿದಂತೆ ಹಲವರ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.
21 November 2024, 16:17