ಅಮೆರಿಕ ಅಧ್ಯಕ್ಷ ಚುನಾವಣಾ ಕಣದಿಂದ ಹಿಂದೆ ಸರಿದ ಹಿನ್ನೆಲೆ ಇದೇ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್
ವರದಿ: ಡೆಬೋರಾ ಕ್ಯಾಸ್ಟಲೀನೋ ಲುಬೋವ್, ಅಜಯ್ ಕುಮಾರ್
ಇದೇ ವರ್ಷ ಕೊನೆಯಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷ ಚುನಾವಣಾ ಕಣದಿಂದ ಹಿಂದೆ ಸರಿದಿರುವ ಅಮೆರಿಕಾದ ಅಧ್ಯಕ್ಷ ಜೋಬೈಡನ್ ಅವರು ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅಮೆರಿಕ ಅಧ್ಯಕ್ಷರ ಕಚೇರಿಯಿಂದ ಅವರ ಸಂದೇಶವನ್ನು ಬಿಡುಗಡೆ ಮಾಡಲಾಗಿದೆ.
ಡೆಮಾಕ್ರೆಟಿಕ್ ಪಕ್ಷದ ಸದಸ್ಯರು ಜ್ಯುಬೈಡನ್ ಅವರ ಮಾನಸಿಕ ಪರಿಸ್ಥಿತಿಯ ಕುರಿತು ವಿಶ್ವಾಸವನ್ನು ವ್ಯಕ್ತಪಡಿಸಲು ಹಿಂದೇಟು ಹಾಕಿದ ಕಾರಣ, ಜೋ ಬೈಡನ್ ಅವರು ಅಧ್ಯಕ್ಷ ಚುನಾವಣೆಗಳ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಈವರೆಗೂ ಅವರು ಅಮೆರಿಕಾದ ಅಧ್ಯಕ್ಷ ಅಭ್ಯರ್ಥಿಗಳಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದರು.
ತಮ್ಮ ಸಂದೇಶದಲ್ಲಿ ಮಾತನಾಡಿರುವ ಅವರು ಇಷ್ಟು ದಿನ ಅಮೆರಿಕಾದ ಜನತೆ ನನ್ನಲ್ಲಿ ಇಟ್ಟ ವಿಶ್ವಾಸಕ್ಕಾಗಿ ನಾನು ಅವರಿಗೆ ಋಣಿಯಾಗಿದ್ದೇನೆ ಎಂದು ಹೇಳಿದ್ದಾರೆ. ಪ್ರಸ್ತುತ ಅಮೆರಿಕಾದ ಉಪಾಧ್ಯಕ್ಷೇ ಕಮಲ ಹ್ಯಾರಿಸ್ ಅವರನ್ನು ಡೆಮಾಕ್ರೆಟಿಕ್ ಪಕ್ಷದ ಅಧಿಕೃತ ಅಧ್ಯಕ್ಷ ಅಭ್ಯರ್ಥಿ ಎಂದು ನಾಮನಿರ್ದೇಶನ ಮಾಡುತ್ತೇನೆ ಎಂದು ಸಹ ಹೇಳಿದ್ದಾರೆ.