ಹುಡುಕಿ

ಬೈಡೆನ್ ಹಿಂದೆಸರಿದ ಬೆನ್ನಲ್ಲೇ ಡೆಮಾಕ್ರಟಿಕ್ ಪಕ್ಷಕ್ಕೆ ಅಭ್ಯರ್ಥಿ ಗೊಂದಲ

ಮುಂಬರಲಿರುವ ಅಮೇರಿಕಾ ಚುನಾವಣೆಗಳಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ ಅಮೇರಿಕಾದ ಅಧ್ಯಕ್ಷ ಜೋಸೆಫ್ ಬೈಡೆನ್ ಅವರು ಒಮ್ಮಿಂದೊಮ್ಮೆಗೆ ಕಣದಿಂದ ಹಿಂದೆ ಸರಿದಿದ್ದಾರೆ, ತನ್ಮೂಲಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯನ್ನಾಗಿ ನಾಮನಿರ್ದೇಶನಗೊಳಿಸಿದ್ದಾರೆ. ಆದರೆ, ಇದು ಇನ್ನೂ ಅಧಿಕೃತವಾಗದ ಕಾರಣ ಡೆಮಾಕ್ರಟಿಕ್ ಪಕ್ಷದಿಂದ ಯಾರು ಅಭ್ಯರ್ಥಿ ಎಂಬುದು ಇನ್ನೂ ಗೊಂದಲದ ಗೂಡಾಗಿದೆ.

ವರದಿ: ಡೆಬೋರಾ ಕ್ಯಾಸ್ಟಲೀನೋ ಲುಬೋವ್, ಅಜಯ್ ಕುಮಾರ್

ಮುಂಬರಲಿರುವ ಅಮೇರಿಕಾ ಚುನಾವಣೆಗಳಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ ಅಮೇರಿಕಾದ ಅಧ್ಯಕ್ಷ ಜೋಸೆಫ್ ಬೈಡೆನ್ ಅವರು ಒಮ್ಮಿಂದೊಮ್ಮೆಗೆ ಕಣದಿಂದ ಹಿಂದೆ ಸರಿದಿದ್ದಾರೆ, ತನ್ಮೂಲಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯನ್ನಾಗಿ ನಾಮನಿರ್ದೇಶನಗೊಳಿಸಿದ್ದಾರೆ. ಆದರೆ, ಇದು ಇನ್ನೂ ಅಧಿಕೃತವಾಗದ ಕಾರಣ ಡೆಮಾಕ್ರಟಿಕ್ ಪಕ್ಷದಿಂದ ಯಾರು ಅಭ್ಯರ್ಥಿ ಎಂಬುದು ಇನ್ನೂ ಗೊಂದಲದ ಗೂಡಾಗಿದೆ. 

ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಸ್ಥಾನದಿಂದ ಹಿಂದೆ ಸರಿಯುತ್ತಿರುವಂತೆ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿರುವ ಜೋ ಬೈಡೆನ್ ತನ್ನ ಅಧ್ಯಕ್ಷಾವಧಿಯನ್ನು ಪೂರ್ಣಗೊಳಿಸುತ್ತೇನೆ ಎಂದು ಹೇಳಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಕಾರಣದ ಕುರಿತು ದೇಶಕ್ಕೆ ಮುಂಬರುವ ದಿನಗಳಲ್ಲಿ ತಿಳಿಸುತ್ತೇನೆ ಎಂದು ಮಾಧ್ಯಮ ಪ್ರಕಟನೆಯಲ್ಲಿ ಬೈಡೆನ್ ತಿಳಿಸಿದ್ದಾರೆ ಮಾತ್ರವಲ್ಲದೆ, ಅಮೇರಿಕಾ ಎಂಬ ಮಹಾನ್ ದೇಶದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಜನತೆಗೆ ತಮ್ಮ ಧನ್ಯವಾದಗಳನ್ನು ತಿಳಿಸಿದ್ದಾರೆ.

ಮುಂದುವರೆದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಬೈಡೆನ್ ಅವರು ನಮ್ಮ ಪಕ್ಷದ ಮುಂದಿನ ಅಭ್ಯರ್ಥಿಯಾಗಿ ನಾನು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಹೃದಯಾಂತರಾಳದಿಂದ ನಾಮನಿರ್ದೇಶನ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಡೆಮಾಕ್ರಟಿಕ್ ಪಕ್ಷ ಯಾವುದೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೂ ಸಹ ಅವರು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಅಮೇರಿಕಾದ ಮಾಜಿ ಅಧ್ಯಕ್ಷರಾಗಿರುವ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಸೆಣಸಲಿದ್ದಾರೆ. ಜೆ. ಡಿ. ವ್ಯಾನ್ಸ್ ಅವರನ್ನು ರಿಪಬ್ಲಿಕನ್ ಪಕ್ಷದಿಂದ ಉಪಾಧ್ಯಕ್ಷ ಪದವಿಯ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.   

22 July 2024, 14:38