ವಿಶ್ವ ನಾಯಕರ ಶಾಂತಿ ಸ್ಥಾಪನೆ ಪ್ರಯತ್ನಗಳು ಉಕ್ರೇನ್-ರಷ್ಯಾ ಯುದ್ಧವನ್ನು ನಿಲ್ಲಿಸಬಹುದು
ವರದಿ: ಸ್ಟೆಫಾನ್ ಜೆ. ಬಾಸ್, ಅಜಯ್ ಕುಮಾರ್
ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರ ಪ್ರಕಾರ ವಿಶ್ವ ನಾಯಕರ ಶಾಂತಿ ಸ್ಥಾಪನೆಯ ಪ್ರಯತ್ನಗಳು ಉಕ್ರೇನ್-ರಷ್ಯಾ ಯುದ್ಧವನ್ನು ನಿಲ್ಲಿಸಬಹುದು. ಇತ್ತೀಚೆಗೆ ಉಕ್ರೇನ್ ಹಾಗೂ ಪೋಲೆಂಡ್ ದೇಶಗಳಿಗೆ ಭೇಟಿ ನೀಡಿದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿರುವ ಅವರು, ಇಂತಹ ಪ್ರಯತ್ನಗಳು ಫಲ ನೀಡುತ್ತವೆ ಎಂದು ಹೇಳಿದ್ದಾರೆ.
ಕಳೆದ ವಾರ ನರೇಂದ್ರ ಮೋದಿ ಅವರು ಉಕ್ರೇನ್ ದೇಶಕ್ಕೆ ಭೇಟಿ ನೀಡಿ, ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಿದ್ದರು. ಹೀಗೆ ಅವರನ್ನು ಭೇಟಿ ಮಾಡಿದ ವೇಳೆ ಯುದ್ಧವನ್ನು ಕೊನೆಗೊಳಿಸುವ ಹಿನ್ನೆಲೆಯಲ್ಲಿ ರಷ್ಯಾ ದೇಶವು ಆಹ್ವಾನಿಸಿರುವ ಶಾಂತಿ ಮಾತುಕತೆಗಳಿಗೆ ತೆರಳಿ ಚರ್ಚಿಸಬೇಕೆಂದು ಕಿವಿಮಾತನ್ನು ಹೇಳಿದ್ದಾರೆ.
ಇದಕ್ಕೂ ಮುಂಚಿತವಾಗಿ ಅವರು ರಷ್ಯಾ ದೇಶಕ್ಕೆ ಭೇಟಿ ನೀಡಿದ್ದರು. ಇದೀಗ ಅವರ ನಡೆಗೆ ಪ್ರಶಂಸೆಯನ್ನು ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಅಮೇರಿಕಾವು ಸಹ ಯಾವುದೇ ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.