ಉಕ್ರೇನ್ ಮೇಳೆ ಖಂಡಾಂತರ ಕ್ಷಿಪಣಿ ದಾಳಿ ನಡೆಸಿದ ರಷ್ಯಾ
ವರದಿ: ವ್ಯಾಟಿಕನ್ ನ್ಯೂಸ್
ಉಕ್ರೇನ್: ಉಕ್ರೇನ್ ಮತ್ತು ರಷ್ಯಾ ನಡುವೆ ಸಂಘರ್ಷ ಮುಂದುವರಿದಿದ್ದು, ರಷ್ಯಾ ಉಕ್ರೇನ್ ಮೇಲೆ ಇದೇ ಮೊದಲ ಬಾರಿಗೆ ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿ(ICBM) ದಾಳಿ ನಡೆಸಿದೆ.
ವ್ಲಾದಿಮಿರ್ ಪುಟಿನ್ ರಷ್ಯಾದ ಪರಮಾಣು ಕುರಿತ ನಿಯಮಾವಳಿಯಲ್ಲಿ ಬದಲಾವಣೆ ತಂದ ಬೆನ್ನಲ್ಲೇ ರಷ್ಯಾ ಉಕ್ರೇನ್ ಮೇಲೆ ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿ ಮೂಲಕ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ICBM ಗಳು ಎಂದು ಕರೆಯಲಾಗುತ್ತದೆ, ಈ ಕುರಿತು ಉಕ್ರೇನ್ ವಾಯುಪಡೆ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ರಷ್ಯಾದ ಪಡೆಗಳು ಗುರುವಾರ ಬೆಳಿಗ್ಗೆ ಮಧ್ಯ ಉಕ್ರೇನ್ ನ ದ್ನಿಪ್ರೊ ನಗರದ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಹೇಳಿದೆ. ಉಕ್ರೇನ್ ನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ.
2022ರ ಫೆಬ್ರವರಿ 24ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನೆರೆ ರಾಷ್ಟ್ರ ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸಿದ್ದರು. ಈ ಘನಘೋರ ಯುದ್ಧದಲ್ಲಿ ಹಲವಾರು ಮಂದಿ ಮೃತಪಟ್ಟಿದ್ದಾರೆ.