ಹುಡುಕಿ

ಉಕ್ರೇನ್ ಯುದ್ಧ ನಿಲ್ಲಿಸುವಲ್ಲಿ ಟ್ರಂಪ್-ಪುಟಿನ್ ಚರ್ಚೆ

ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಕುರಿತಾಗಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ವರದಿ: ವ್ಯಾಟಿಕನ್ ನ್ಯೂಸ್

ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಕುರಿತಾಗಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಫ್ಲೋರಿಡಾದ ತಮ್ಮ ರೆಸಾರ್ಟ್‌ನಿಂದ ವ್ಲಾಡಿಮಿರ್ ಪುಟಿನ್‌ಗೆ ಕರೆ ಮಾಡಿರುವ ಅವರು, ಉಕ್ರೇನ್‌ನಲ್ಲಿ ಯುದ್ಧ ನಿಲ್ಲಿಸುವ ಕುರಿತಾಗಿ ಪುಟಿನ್‌ಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಇಬ್ಬರು ನಾಯಕರು ತಮ್ಮ ಫೋನ್ ಸಂಭಾಷಣೆಯಲ್ಲಿ, ಯುರೋಪ್‌ ಖಂಡದಲ್ಲಿ ಶಾಂತಿ ಸ್ಥಾಪಿಸುವುದು ಮತ್ತು ಉಕ್ರೇನ್‌ನಲ್ಲಿ ಯುದ್ಧ ನಿಲ್ಲಿಸುವ ಕುರಿತು ಪರಿಹಾರೋಪಾಯಗಳನ್ನು ಶೀಘ್ರದಲ್ಲೇ ಚರ್ಚಿಸುವ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ವಾಷಿಂಗ್ಟನ್​ ಪೋಸ್ಟ್ ಪತ್ರಿಕೆ ತನ್ನ ವಿಶೇಷ ವರದಿಯಲ್ಲಿ ತಿಳಿಸಿದೆ.

ಡೊನಾಲ್ಡ್​​ ಟ್ರಂಪ್ ಜನವರಿ 20, 2025ರಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನವೆಂಬರ್​ 5ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ವಿಜಯ ದಾಖಲಿಸಿದ ಟ್ರಂಪ್,​ 70ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಮಾತನಾಡಿದ್ದಾರೆ. ಅವರು ಕರೆ ಮಾಡಿದ ಮೊದಲಿಗರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದ್ದಾರೆ.

11 November 2024, 16:35